ವಿದ್ಯುತ್ ತಂತಿ ತಗುಲಿ ಮೃತಪಟ್ಟ ಕುಟುಂಬಕ್ಕೆ ಧನ ಸಹಾಯ ನೀಡುವ ಮೂಲಕ ಮಾನವೀಯತೆ ಮೆರೆದ ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್
ಕೆ.ಆರ್.ಪೇಟೆ: ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ನೇತ್ರಾವತಿ ಮೋಹನ್ (47) ಬುಧವಾರ ಮಧ್ಯಾನ ಕೃಷಿ ಚಟುವಟಿಕೆ ನಡೆಸುವ ಸಂದರ್ಭದಲ್ಲಿ ಕೆಇಬಿ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಹಿನ್ನೆಲೆಯಲ್ಲಿ. ನೇತ್ರಾವತಿ ಮೋಹನ್ ರವರ ನಿವಾಸಕ್ಕೆ ಸಮಾಜ ಸೇವಕರಾದ ಆರ್.ಟಿ.ಓ ಮಲ್ಲಿಕಾರ್ಜುನ್ ಭೇಟಿ ನೀಡಿ ಘಟನಾ ಸ್ಥಳ ಪರಿಶೀಲಿಸಿ ಮೃತ ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯದ ಜೊತೆಗೆ ಧನ ಸಹಾಯ ನೀಡುವ ಮೂಲಕ ಮಾನವೀಯತೆ ಮೆರೆದ ಮಾತನಾಡಿದ ಅವರು. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಜನರು ಆಕಸ್ಮಿಕ ಅವಘಡಗಳಿಂದ ಮೃತಪಡುತ್ತಿರುವುದು ನಿಜಕ್ಕೂ ಬೇಸರದ ಸಂಗತಿ.ಹಾಗಾಗಿ ಪ್ರತಿಯೊಬ್ಬರು ಎಚ್ಚರಿಕೆಯಿಂದ ಹೆಜ್ಜೆ ಇಟ್ಟು ತಮ್ಮ ಕಾಯಕವನ್ನು ಮಾಡಬೇಕು ಇಲ್ಲದಿದ್ದರೆ ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಳ್ಳುವ ಅನಿವಾರ್ಯ ಪರಿಸ್ಥಿತಿ ಉದ್ಭವವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗಂಜಿಗೆರೆ ಗ್ರಾಮ ಪಂಚಾಯತಿ ಅಧ್ಯಕ್ಷ ಪರಮೇಶ್, ಕೃಷಿ ಪತ್ತಿನ ಸಹಕಾರ ಸಂಘದ ಸದ್ಯಸ ನಾಗೇಶ್, ಮುಖಂಡರಾದ ಮಂಜಣ್ಣ, ಲೋಕೇಶ್, ರಾಜಣ್ಣ, ಚಂನ್ನೇಗೌಡ, ಮಂಜುನಾಥ್, ಶಿವಣ್ಣ,ಕುಮಾರ್, ರಾಕೇಶ್, ರವಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.